Proverbs 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
Kannada BSI Bible 2016
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು; ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
Kannada Bible (KNCL) BSI 2016
ಮನೆಯವರನ್ನೆ ಬಾಧಿಸುವವನು ಗಳಿಸುವುದು ಗಾಳಿ; ಬಿದ್ದಿರುವನವನು ಜ್ಞಾನಿಗೆ ಊಳಿಗನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.