Proverbs 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
Kannada BSI Bible 2016
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
Kannada Bible (KNCL) BSI 2016
ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.