Proverbs 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
Kannada BSI Bible 2016
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನನುಭವಿಸುವನು; ಅವನ ಕೈಕೆಲಸದ ಫಲವು ಅವನಿಗೇ ಪ್ರಾಪ್ತವಾಗುವದು.
Kannada Bible (KNCL) BSI 2016
ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.