Proverbs 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
Kannada BSI Bible 2016
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
Kannada Bible (KNCL) BSI 2016
ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.