Proverbs 12:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
Kannada BSI Bible 2016
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.
Kannada Bible (KNCL) BSI 2016
ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.