Proverbs 12:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
Kannada BSI Bible 2016
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.
Kannada Bible (KNCL) BSI 2016
ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.