Proverbs 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
Kannada BSI Bible 2016
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.
Kannada Bible (KNCL) BSI 2016
ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.