Proverbs 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
Kannada BSI Bible 2016
ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.
Kannada Bible (KNCL) BSI 2016
ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.