Proverbs 13:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
Kannada BSI Bible 2016
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.
Kannada Bible (KNCL) BSI 2016
ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.