Proverbs 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
Kannada BSI Bible 2016
ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ.
Kannada Bible (KNCL) BSI 2016
ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.