Proverbs 14:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
Kannada BSI Bible 2016
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.
Kannada Bible (KNCL) BSI 2016
ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.