Proverbs 14:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
Kannada BSI Bible 2016
ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.
Kannada Bible (KNCL) BSI 2016
ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.