Proverbs 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
Kannada BSI Bible 2016
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
Kannada Bible (KNCL) BSI 2016
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.