Proverbs 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
Kannada BSI Bible 2016
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.
Kannada Bible (KNCL) BSI 2016
ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.