Proverbs 15:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
Kannada BSI Bible 2016
ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.
Kannada Bible (KNCL) BSI 2016
ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.