Proverbs 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
Kannada BSI Bible 2016
ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.
Kannada Bible (KNCL) BSI 2016
ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.