Proverbs 17:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಗಳದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಚ್ಚಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
Kannada BSI Bible 2016
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಪ್ರಿಯನು ಕಲಹಪ್ರಿಯ; ತನ್ನ ಬಾಗಿಲನ್ನು ಎತ್ತರಿಸುವವನು ಹಾಳಾಗುವನು.
Kannada Bible (KNCL) BSI 2016
ಕಲಹಪ್ರಿಯನು ಪಾಪಪ್ರಿಯನು; ಕದವನ್ನು ಎತ್ತರಿಸಿದವನು ಕೇಡನ್ನು ಬರಮಾಡಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.