Proverbs 17:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
Kannada BSI Bible 2016
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
Kannada Bible (KNCL) BSI 2016
ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.