Proverbs 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
Kannada BSI Bible 2016
ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
Kannada Bible (KNCL) BSI 2016
ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.