Proverbs 17:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
Kannada BSI Bible 2016
ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
Kannada Bible (KNCL) BSI 2016
ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.