Proverbs 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
Kannada BSI Bible 2016
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಾಯಹೊಂದಿದ ಸಹೋದರನು ಬಲವಾದ ಪಟ್ಟಣಕ್ಕಿಂತಲೂ ಅಸಾಧ್ಯ; ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
Kannada Bible (KNCL) BSI 2016
ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.