Proverbs 18:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
Kannada BSI Bible 2016
ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.
Kannada Bible (KNCL) BSI 2016
ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.