Proverbs 19:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
Kannada BSI Bible 2016
ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.
Kannada Bible (KNCL) BSI 2016
ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.