Proverbs 19:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
Kannada BSI Bible 2016
ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.
Kannada Bible (KNCL) BSI 2016
ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.