Proverbs 19:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
Kannada BSI Bible 2016
ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮನಿಂದಕನಿಗೆ ಪೆಟ್ಟುಹೊಡೆ, [ನೋಡಿದ] ಮಂದಮತಿಯು ಜಾಣನಾಗುವನು; ವಿವೇಕಿಯನ್ನು ಗದರಿಸು, ತಾನೇ ತಿಳುವಳಿಕೆಯನ್ನು ಗ್ರಹಿಸುವನು.
Kannada Bible (KNCL) BSI 2016
ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.