Proverbs 19:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
Kannada BSI Bible 2016
ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.
Kannada Bible (KNCL) BSI 2016
ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.