Proverbs 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
Kannada BSI Bible 2016
ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.
Kannada Bible (KNCL) BSI 2016
ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.