Proverbs 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
Kannada BSI Bible 2016
ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಳ್ಳುವವನು - ಚೆನ್ನಾಗಿಲ್ಲ, ಚೆನ್ನಾಗಿಲ್ಲ ಎಂದು ಹೇಳುತ್ತಾನೆ. ಕೊಂಡುಕೊಂಡು ಹೋಗಿ ಹೆಚ್ಚಳ ಪಡುತ್ತಾನೆ.
Kannada Bible (KNCL) BSI 2016
ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.