Proverbs 20:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನು ಕಳೆದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
Kannada BSI Bible 2016
ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ; ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
Kannada Bible (KNCL) BSI 2016
ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.