Proverbs 21:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ತಾನೇ ತಿಳುವಳಿಕೆಯನ್ನು ಹೊಂದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
Kannada BSI Bible 2016
ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮನಿಂದಕನಿಗೆ ದಂಡನೆಯಾದರೆ [ನೋಡಿದ] ಮಂದಮತಿಯು ಜ್ಞಾನವನ್ನು ಪಡೆಯುವನು; ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳುವಳಿಕೆಯನ್ನು ಹೊಂದುವನು.
Kannada Bible (KNCL) BSI 2016
ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.