Proverbs 21:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
Kannada BSI Bible 2016
ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
Kannada Bible (KNCL) BSI 2016
ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.