Proverbs 21:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
Kannada BSI Bible 2016
ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.
Kannada Bible (KNCL) BSI 2016
ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.