Proverbs 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
Kannada BSI Bible 2016
ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಕಣ್ಣು ತಿಳುವಳಿಕೆಗೆ ಕಾವಲು; ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
Kannada Bible (KNCL) BSI 2016
ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.