Proverbs 22:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
Kannada BSI Bible 2016
ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದೀತು ಎಂಬದು ಸೋಮಾರಿಯ ನೆವ.
Kannada Bible (KNCL) BSI 2016
“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.