Proverbs 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
Kannada BSI Bible 2016
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
Kannada Bible (KNCL) BSI 2016
ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.