Proverbs 22:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
Kannada BSI Bible 2016
ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ.
Kannada Bible (KNCL) BSI 2016
ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.