Proverbs 22:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
Kannada BSI Bible 2016
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
Kannada Bible (KNCL) BSI 2016
ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.