Proverbs 23:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
Kannada BSI Bible 2016
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
Kannada Bible (KNCL) BSI 2016
ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?