Proverbs 23:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
Kannada BSI Bible 2016
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
Kannada Bible (KNCL) BSI 2016
ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.