Proverbs 23:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
Kannada BSI Bible 2016
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
Kannada Bible (KNCL) BSI 2016
ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.