Proverbs 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
Kannada BSI Bible 2016
ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ನನಗೆ ಗೊತ್ತಿರಲಿಲ್ಲ ಎಂದು ನೀನು ನೆವ ಹೇಳಿದರೆ ಹೃದಯಶೋಧಕನು ಗ್ರಹಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆಬಿಟ್ಟಾನೇ?
Kannada Bible (KNCL) BSI 2016
ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?