Proverbs 24:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
Kannada BSI Bible 2016
ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
Kannada Bible (KNCL) BSI 2016
ಅಂತೆಯೇ ಜ್ಞಾನ ನಿನ್ನ ಆತ್ಮಕ್ಕೆ ಸಿಹಿಯೆಂದು ತಿಳಿ; ಅದನ್ನು ಪಡೆದೆಯಾದರೆ ನಿನ್ನ ಭವಿಷ್ಯ ಶುಭಕರ, ನಿನ್ನ ನಿರೀಕ್ಷೆ ಆಗದು ನಿರರ್ಥಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.