Proverbs 24:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
Kannada BSI Bible 2016
ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಅಧರ್ಮಿಗೆ - ನೀನು ಧರ್ಮಾತ್ಮ ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
Kannada Bible (KNCL) BSI 2016
ಅಪರಾಧಿಗೆ “ನೀನು ನಿರಪರಾಧಿ” ಎಂದು ತೀರ್ಪು ಕೊಡುವವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು.