Proverbs 24:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
Kannada BSI Bible 2016
ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವದು, ಸುಖಕರವಾದ ಆಶೀರ್ವಾದವೂ ಲಭಿಸುವದು.
Kannada Bible (KNCL) BSI 2016
ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು.