Proverbs 24:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
Kannada BSI Bible 2016
ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೆಲಸದ ಸಾಮಾನುಗಳನ್ನು ಸುತ್ತಲು ಅಣಿಮಾಡು, ನಿವೇಶನದಲ್ಲಿ ಸಿದ್ಧಪಡಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
Kannada Bible (KNCL) BSI 2016
ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.