Proverbs 25:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
Kannada BSI Bible 2016
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು.
Kannada Bible (KNCL) BSI 2016
ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.