Proverbs 26:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೋಮಾರಿಯು ತಟ್ಟೆಯಲ್ಲಿರುವ ಊಟವನ್ನು ತಿನ್ನುವುದಕ್ಕೂ ಬಹು ಆಯಾಸಪಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
Kannada BSI Bible 2016
ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರ ತರಲಾರದಷ್ಟು ಆಯಾಸಪಡುತ್ತಾನೆ.
Kannada Bible (KNCL) BSI 2016
ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.