Proverbs 26:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
Kannada BSI Bible 2016
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ.
Kannada Bible (KNCL) BSI 2016
ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.