Proverbs 26:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
Kannada BSI Bible 2016
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಗೆಯವನು ತುಟಿಯಲ್ಲಿ ಸ್ನೇಹಭಾವವನ್ನು ನಟಿಸುತ್ತಾನೆ. ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ;
Kannada Bible (KNCL) BSI 2016
ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.