Proverbs 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Kannada BSI Bible 2016
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು; ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Kannada Bible (KNCL) BSI 2016
ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.